ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ
ಚುಂಬಕ ಗಾಳಿಯು ಬೀಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ
ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ಧಾರೆಯ ಮಸೆಯಿಸಿತು
ಅಕ್ಷಿನಿಮೀಲನ ಮಾಡದೆ ನಕ್ಷತ್ರದ
ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ (ಪಿ.ಬಿ. ಶ್ರೀನಿವಾಸ್ ಮತ್ತು ಪಿ. ಸುಶೀಲ)
ಚುಂಬಕ ಗಾಳಿಯು ಬೀಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ
ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ಧಾರೆಯ ಮಸೆಯಿಸಿತು
ಅಕ್ಷಿನಿಮೀಲನ ಮಾಡದೆ ನಕ್ಷತ್ರದ
ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ
ದ.ರಾ. ಬೇಂದ್ರೆ
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್
ಮಾಡಿ (ಪಂ|| ಭೀಮಸೇನ ಜೋಷಿ)ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ (ಪಿ.ಬಿ. ಶ್ರೀನಿವಾಸ್ ಮತ್ತು ಪಿ. ಸುಶೀಲ)
No comments:
Post a Comment